ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅಧಿವೇಶನಕ್ಕೆ ವಿವಿಧ ವಲಯಗಳ ಸಂಘಟನೆಗಳಿಂದ ಪ್ರತಿಭಟನೆ ಬಿಸಿ ತಟ್ಟಲಿದೆ. ಇದೀಗ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಶನ್ ಸಂಘದಿಂದ ಡಿಸೆಂಬರ್ 13ಕ್ಕೆ ಹಲವು ಬೇಡಿಕೆ ಮುಂದಿಟ್ಟು ಬೆಳಗಾವಿ ಚಲೋ ಕಾರ್ಯಕ್ರಮ ಕ್ಕೆ ಕರೆ ಕೊಟ್ಟಿದ್ದಾರೆ.
ಈ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಸುಮಾರು 2500 ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 13 ರಂದು ಬೆಳಗಾವಿಗೆ ತೆರಳಿ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





