ಬೆಂಗಳೂರು: ರಾಜ್ಯದಲ್ಲಿರುವ ವಿಶೇಷ ಅರಣ್ಯದ (ಡೀಮ್ಡ್ ಫಾರೆಸ್ಟ್) ಬಗ್ಗೆ ಜಂಟಿಯಾಗಿ ಸರ್ವೆ ನಡೆಸಿ 6 ತಿಂಗಳಲ್ಲಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸುವಂತೆ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿರುವ ವಿಶೇಷ ಅರಣ್ಯದ (ಡೀಮ್ಡ್ ಫಾರೆಸ್ಟ್) ಬಗ್ಗೆ ಜಂಟಿ ಸಮೀಕ್ಷೆ ಮಾಡಿ ವರದಿ ಕಳಿಸಿದರೆ ಅದರಲ್ಲಿ ಉಂಟಾಗಿರುವ ಲೋಪ ಸರಿಪಡಿಸುವುದಾಗಿ ಕೇಂದ್ರ ಸರಕಾರದಿಂದ ಸುತ್ತೋಲೆ ಬಂದಿದೆ. ಆ ಸುತ್ತೋಲೆ ಪ್ರಕಾರ ಜಿಲ್ಲೆ, ಪ್ರಾದೇಶಿಕ ಹಾಗೂ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಅರಣ್ಯ ಹಾಗೂ ಕಂದಾಯ ಇಲಾಖೆಗಳು ಈ ಬಗ್ಗೆ ಸಮೀಕ್ಷೆ ನಡೆಸಿ 6 ತಿಂಗಳಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
ಉಪಗ್ರಹ ಆಧಾರಿತ ಚಿತ್ರ ನೋಡಿಕೊಂಡು ಅರಣ್ಯ ಒತ್ತುವರಿಯಾಗಿರುವುದು ಕಂಡು ಬಂದರೆ ತತ್‌ಕ್ಷಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಅರಣ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





