Breaking News

ಸಾರಿಗೆ ನೌಕರರ ಒಕ್ಕೂಟದಿಂದ ಡಿ.31 ರಿಂದ ಮುಷ್ಕರ ನಡೆಸಲು ಚಿಂತನೆ

ಬೆಂಗಳೂರು: ಕರ್ನಾಟಕದ ಸಾರಿಗೆ ನೌಕರರ ಒಕ್ಕೂಟ ಡಿಸೆಂಬರ್ 31ರಿಂದ ಮುಷ್ಕರ ನಡೆಸಲು ಚಿಂತನೆ ನಡೆಸಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಾರಿಗೆ ನೌಕರರ ಸಂಘಟನೆಗಳ ಜೊತೆ ಸಭೆಯನ್ನು ನಡೆಸಿದ್ದು, ನೌಕರರಿಗೆ ಹಲವು ಭರವಸೆಗಳನ್ನು ನೀಡಿದ್ದಾರೆ. ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಸಹ ಮಾತನಾಡಿದ್ದಾರೆ.
ಬೆಳಗಾವಿ ಚಲೋ ನಡೆಸಿ, ನೌಕರರು ಮುಷ್ಕರ ನಡೆಸಲು ನೋಟಿಸ್ ನೀಡುವುದು ಸಹ ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.
ಸಾರಿಗೆ ಇಲಾಖೆಯ ಸಿಬ್ಬಂದಿಗಳು ಹಲವು ವರ್ಷಗಳಿಂದ ನಗದು ರಹಿತ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಬೇಡಿಕೆ ಇಟ್ಟಿದ್ದರು. ಈಗಾಗಲೇ ಕರ್ನಾಟಕದ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಇದೆ. ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ಯೋಜನೆಯಡಿ ಅನುಕೂಲವಾಗುತ್ತದೆ.
ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ಸಿಬ್ಬಂದಿಗಳ ಹಲವು ವರ್ಷಗಳ ಬೇಡಿಕೆಯಾದ ನಗದು ರಹಿತ ಆರೋಗ್ಯ ಸೇವೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *