ಹುಬ್ಬಳ್ಳಿ: ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ರಾಜ್ಯದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡ್ತಾರೆ. ಒಂದು ಕಡೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡ್ತಾರೆ. ಇದು ಇಬ್ಬದಿತನ ಅಲ್ಲವಾ? ಬಿಜೆಪಿಯವರಿಗೆ ಸ್ಪಷ್ಟವಾದ ನಿಲುವು ಇಲ್ಲ. ನಮ್ಮ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿದ ಯಾವ ಕೆಲಸಗಳು ಸ್ಥಗಿತವಾಗಿವೆ ಹೇಳಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





