Breaking News

ಹೊಸ ರೈಲು ಮಾರ್ಗ ಕುರಿತು ಸಂಬಂಧ ಮಹತ್ವದ ಚರ್ಚೆ

ಹುಬ್ಬಳ್ಳಿ: ಬಹು ಕಾಲದಿಂದ ಬೇಡಿಕೆ ಇರುವ ಹಾಗೂ ಸುದೀರ್ಘ ಅವಧಿಯಲ್ಲಿ ಮೂರು ಬಾರಿ ಸಮೀಕ್ಷೆ ಸಹ ನಡೆದ ಹುಬ್ಬಳ್ಳಿ – ಶಿರಸಿ ತಾಳಗುಪ್ಪ ಮತ್ತು ಧಾರವಾಡ – ಬೆಳಗಾವಿ ಹೊಸ ರೈಲು ಮಾರ್ಗ ಸಂಬಂಧ ಮಹತ್ವದ ಚರ್ಚೆ ನಡೆದಿದೆ.

ಹುಬ್ಬಳ್ಳಿಯ ನೈಋತ್ಯ ರೈಲ್ವೆ ಮಹಾ ಪ್ರಬಂಧಕರ ಕಚೇರಿಯಲ್ಲಿ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಮತ್ತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ನೈಋತ್ಯ ರೈಲ್ವೆ ಮಹಾ ಪ್ರಬಂಧಕರೊಂದಿಗೆ ನಡೆದ ಸಭೆಯಲ್ಲಿ ಈ ಬಗ್ಗೆ ಮಹತ್ತರ ಚರ್ಚೆ ನಡೆಸಲಾಯಿತು.

ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗಕ್ಕೆ ಬೇಕಾಗಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಎಲ್ಲ ಅಡೆ ತಡೆಗಳನ್ನು ನಿವಾರಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲು ನಿಲ್ದಾಣವನ್ನು ವಿಶ್ವದರ್ಜೆ ನಿಲ್ದಾಣವನ್ನಾಗಿಸುವ ಕುರಿತು ಯೋಜನಾ ವರದಿ ಸಹಿತ ಶೀಘ್ರ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ನಿರ್ಧರಿಸಲಾಯಿತು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *