Breaking News

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಸಿಎಂ ನೇತೃತ್ವದಲ್ಲಿ ಡಿ.11 ರಂದು ಮಹತ್ವದ ಸಭೆ

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ.
ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಅಜಯ್‌ ಕುಮಾರ್‌ ಸರನಾಯಕ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಯೋಜನೆ ಪೂರ್ಣಗೊಳಿಸಲು ಅಹೋರಾತ್ರಿ ಹೋರಾಟದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವಂತೆ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಬಾಗಲಕೋಟೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *