Breaking News

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: 3 ದಿನ ಶೋಕಾಚರಣೆ ಘೋಷಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.
ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *