Breaking News

ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟ: ಹರಿದುಬರುತ್ತಿದೆ ಜನಸಾಗರ

ಬೆಳಗಾವಿ: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ, ಸುವರ್ಣ‌ ವಿಧಾನಸೌಧ ಬಳಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ.
ವಿವಿಧೆಡೆಯಿಂದ ಬರುತ್ತಿರುವ ಟ್ರ್ಯಾಕ್ಟರ್‌ಗಳನ್ನು ಹಿರೇಬಾಗೇವಾಡಿ ಬಳಿಯೇ ತಡೆಯಲಾಗಿದೆ.
ಹಾಗಾಗಿ ಜನರು ಕಾಲ್ನಡಿಗೆ ಮೂಲಕವೇ ಪ್ರತಿಭಟನಾ ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಒಬ್ಬೊಬ್ಬರೇ ನಾಯಕರು ಬಂದು ಭಾಗಿಯಾಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಇದೀಗ ವೇದಿಕೆಗೆ ಬಂದಿದ್ದು, ಸಾವಿರಾರು ಕಾರ್ಯಕರ್ತರು ಜೈಕಾರ ಹಾಕುತ್ತಿದ್ದಾರೆ. ಪಂಚಮಸಾಲಿ ಸಮುದಾಯದ ಹಿರಿಯ ನಾಯಕರು ಒಬ್ಬೊಬ್ಬರಾಗಿ ಬಂದು ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಸಿ.ಸಿ.ಪಾಟೀಲ, ಅರವಿಂದ ಬೆಲ್ಲದ ಭಾಗಿ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *