Breaking News

ಎಸ್.ಎಂ. ಕೃಷ್ಣ ಅವರಿಗೆ ಸಂತಾಪ ಸೂಚಿಸಿದ ಶೆಟ್ಟರ್

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರು ತಮ್ಮ 92 ನೇ ವರ್ಷಕ್ಕೆ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖಭರಿತನಾಗಿರುವೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟ‌ರ್ ಅವರು ಸಂತಾಪ ತಿಳಿಸಿದ್ದಾರೆ.

ಎಸ್.ಎಮ್ ಕೃಷ್ಣಾ ಹಾಗೂ ತಮ್ಮ ಪರಿಚಯ ತುಂಬಾ ಕಾಲದ್ದು, ಅವರ ಸರಳತೆಯ ಸ್ವಭಾವ, ಸಜ್ಜನಿಕೆಯ ಗುಣಗಳು ನನಗೆ ಬಹಳ ಇಷ್ಟವಾಗಿದ್ದವು. ಯಾವುದೇ ಒಂದು ಬಿಕಟ್ಟಿನ ಸಮಸ್ಯೆಯನ್ನು ಅತ್ಯಂತ ಚಾಣಾಕ್ಷತನದಿಂದ ಬಗೆಹರಿಸುವ ಶಕ್ತಿ ಅವರಲ್ಲಿತ್ತು ಎಂದರೆ ತಪ್ಪಾಗಲಾರದು. ಅವರ ಮುಖ್ಯಮಂತ್ರಿ ಅವಧಿಯಲ್ಲಿ ರಾಜ್ಯವು ಐಟಿ-ಬಿಟಿ ಕ್ಷೇತ್ರದಲ್ಲಿ ಅತ್ಯಂತ ಗಣನೀಯ ಬೆಳವಣಿಗೆ ಸಾಧಿಸಿದೆ.

ಅವರ ಸಾವಿನಿಂದ ದೇಶವು ಒಬ್ಬ ಮುತ್ಸದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸುತ್ತಾ, ಅಗಲಿದ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಂಸದ ಜಗದೀಶ ಶೆಟ್ಟರ ಹೇಳಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *