Breaking News

ಕಬ್ಬಿನ ದರ ನಿಗದಿಪಡಿಸದಿದ್ದಲ್ಲಿ ರಾಜ್ಯ ರೈತ ಸಂಘದಿಂದ ಹೋರಾಟದ ಎಚ್ಚರಿಕೆ

ಬೀದರ್‌: ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಕಳೆದ ಒಂದು ತಿಂಗಳಿಂದ ಕಬ್ಬು ನುರಿಸುವಿಕೆ ಆರಂಭಿಸಿದ್ದರೂ ಇದುವರೆಗೆ ದರ ನಿಗದಿಪಡಿಸಿಲ್ಲ. ನಾಲ್ಕೈದು ದಿನಗಳಲ್ಲಿ ಬೆಲೆ ನಿಗದಿಪಡಿಸದಿದ್ದಲ್ಲಿ ಹೈದರಾಬಾದ್‌-ಮುಂಬೈ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ.
ರೈತ ಸಂಘದ ಮುಖಂಡರು ನಗರದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಕಬ್ಬಿಗೆ ದರ ನಿಗದಿಪಡಿಸಿದ ಕಾರಣ ಕಬ್ಬು ಬೆಳೆಗಾರರು ಗೊಂದಲಕ್ಕೆ ಒಳಗಾಗಿದ್ದಾರೆ. ಕೂಡಲೇ ದರ ನಿಗದಿಪಡಿಸಬೇಕು. ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಡಿಸಿಸಿ ಬ್ಯಾಂಕ್‌ ವಶಕ್ಕೆ ತೆಗೆದುಕೊಂಡಿದೆ. ಅದನ್ನು ಮಾರಾಟ ಮಾಡಲು ಹುನ್ನಾರ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಕೈಬಿಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದಿಂದ ಅನುದಾನ ತಂದು, ಕಾರ್ಖಾನೆ ಮತ್ತೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಉದ್ದು, ಸೋಯಾ ಬೆಳೆ ಮಳೆಯಿಂದ ನಾಶವಾಗಿದೆ. ಸರ್ವೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆದರೆ, ಸರ್ಕಾರದ ವತಿಯಿಂದ ಇಲ್ಲಿಯವರೆಗೆ ಯಾವ ರೈತರಿಗೂ ಪರಿಹಾರ ಸಿಕ್ಕಿಲ್ಲ. ಕೂಡಲೇ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆ ಮಾಡಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಉಪಾಧ್ಯಕ್ಷ ಚಂದ್ರಶೇಖರ ಜಮಖಂಡಿ, ಮುಖಂಡರಾದ ಪ್ರವೀಣ ಕುಲಕರ್ಣಿ, ಶಂಕ್ರೆಪ್ಪ ಪಾರಾ, ನಾಗಯ್ಯಾ ಸ್ವಾಮಿ, ಪ್ರಕಾಶ ಬಾವಗೆ, ಬಾಬುರಾವ್‌ ಜೋಳದಾಬಕಾ, ರಾಜಕುಮಾರ ಪಾಟೀಲ, ಸುಭಾಷ ರಗಟೆ, ಸತೀಶ ನನ್ನೂರೆ, ಮಲ್ಲಿಕಾರ್ಜುನ ಚಕ್ಕಿ, ಸುಮಂತ ಗ್ರಾಮಲೆ, ಧೂಳಪ್ಪ ಆಣದೂರ ಮತ್ತಿತರರು ಹಾಜರಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *