ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಕೂಡಲ ಸಂಗಮದ ಪೀಠಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧಕ್ಕೆ ಪಾದಯಾತ್ರೆ ಕೈಗೊಂಡಿದ್ದ ನೂರಾರು ಸಮಾಜದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಹೋರಾಟ ಸಮಿತಿ ಧಾರವಾಡ ಜಿಲ್ಲಾ ಘಟಕದ ವಿರೇಶ ಉಂಡಿ ಬಲವಾಗಿ ಖಂಡಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂಬ ಸಮಾಜ ಬಾಂಧವರ ನ್ಯಾಯಯುತ ಬೇಡಿಕೆಯ ಹಕ್ಕೊತ್ತಾಯದೊಂದಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಡೆಸಲಾದ ಶಾಂತಿಯುತ ಪಾದಯಾತ್ರಿಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವ ಮೂಲಕ ಈ ಸಮಾಜದ ವಿರುದ್ಧ ದಮನಕಾರಿ ನೀತಿ ಅನುಸರಿಸಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ದಶಕಗಳಿಂದ ಪಂಚಮಸಾಲಿ ಬಾಂಧವರು ಹೋರಾಟ ನಡೆಸಿಕೊಂಡು ಬರುತ್ತಿದ್ದು, ಪ್ರತಿಯೊಂದು ಸಂದರ್ಭದಲ್ಲಿ ಆಯಾ ಕಾಲದ ಸರ್ಕಾರಗಳು ಪಂಚಮಸಾಲಿ ಸಮುದಾಯದವರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತ ಬಂದಿದ್ದಾರೆ ಎಂದು ವಿರೇಶ ಉಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





