Breaking News

ಇಬ್ಬರು ಕಳ್ಳರು ಬಂಧನ: ಲಕ್ಷಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದ ಖಾಕಿ ಪಡೆ

ಹುಬ್ಬಳ್ಳಿ: ಮನೆಗಳ್ಳತನ ಮಾಡಿ ಎಸ್ಕೆಪ್ ಆಗಿದ್ದ ಇಬ್ಬರು ಕಳ್ಳರು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿ, ಲಕ್ಷಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಕೆಲವು ದಿನಗಳ ಹಿಂದೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ, ಮರಾಠ ಗಲ್ಲಿಯಲ್ಲಿ ಮನೆಯೊಂದರ ಕಳ್ಳತನ ಮಾಡಿದ ಪ್ರಕರಣ ದಾಖಲಾಗಿತ್ತು. ಸದರಿ ಕಳ್ಳತನ ಪ್ರಕರಣವನ್ನು ಭೇದಿಸಲು ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಎಂ.ಎಂ ತಹಶೀಲ್ದಾ‌ರ್ ಮತ್ತವರ ಸಿಬ್ಬಂದಿಯನ್ನೊಳಗೊಂಡ ತಂಡವೊಂದನ್ನು ರಚಿಸಲಾಗಿತ್ತು. ಪೊಲೀಸ್ ತಂಡ ಮಾಹಿತಿಯನ್ನು ಕಲೆಹಾಕಿ ವಿನಾಯಕ್ ಭಜಂತ್ರಿ, ಅಕ್ಷಯ್ ಪಠಾಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 30 ಗ್ರಾಂ ತೂಕದ ಬಂಗಾರ, 190 ಗ್ರಾಂ ತೂಕದ ಬೆಳ್ಳಿಯ ಆಭರಣ, 1 ಎಲ್.ಇ.ಡಿ ಟಿವಿ, ಬೈಕ್ ಹಾಗೂ ನಗದು ಸೇರಿ ಒಟ್ಟು 2,20,000 ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣಾ ವೇಳೆ ಇದೇ ಆರೋಪಿತರು 2 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕಂಡುಬಂದಿದ್ದು ಸದರಿ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಸದರಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಹುಬ್ಬಳ್ಳಿ ಶಹರ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸಪೆಕ್ಟ‌ರ್ ಮತ್ತವರ ಸಿಬಂದಿಯನೊಳಗೊಂಡ ತಂಡದ ಕಾರ್ಯವೃಖರಿಯನ್ನು ಶ್ಲಾಷಿಸಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *