Breaking News

ಕೊಪ್ಪಳದಲ್ಲಿ ಪಂಚಮಸಾಲಿ ಸಂಘದಿಂದ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ 64 ರಲ್ಲಿ ರಸ್ತೆ ಸಂಚಾರ ಬಂದ್

ಕೊಪ್ಪಳ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ 64ರಲ್ಲಿ ರಸ್ತೆ ಸಂಚಾರ ಬಂದ್ ಮಾಡಿದ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಮೀಸಲಾತಿ ಕೊಡಲೇಬೇಕು, ಬೆಳಗಾವಿಯಲ್ಲಿ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಪಂಚಮಸಾಲಿ‌ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರೇನಲ್ಲ. ಸಾಕಷ್ಟು ಜನ ಬಡವರೂ ಇದ್ದಾರೆ. ಅವರ ಅಭಿವೃದ್ಧಿಗಾಗಿ ಮೀಸಲಾತಿ ನೀಡಬೇಕು ಎಂದು ಅಗ್ರಹಿಸಿದರು.
ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ ಸಮಾಜದ ಜನರ ಮೇಲೆ ಹಲ್ಲೆ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯದ ಜನರ ಕ್ಷಮೆ ಕೋರಬೇಕು. ಇಲ್ಲವಾದರೆ ನಮ್ಮ ಹೋರಾಟ ಇನ್ನಷ್ಟು ಉಗ್ರ ಹೋರಾಟ ನಡೆಸಲಾಗುತ್ತದೆ. ಸಿದ್ದರಾಮಯ್ಯ ಕುರಿ ಕಾಯುವ ಸಮುದಾಯದಿಂದ ಬಂದಿದ್ದರೆ ನಾವು ಆಕಳು ಕಾಯುವ ಸಮುದಾಯದಿಂದ ಬಂದಿದ್ದೇವೆ ಎಂದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *