ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ 3ನೇ ಅವಧಿ ಸರ್ಕಾರದಲ್ಲಿ ಕೆಲ ಬಹುನಿರೀಕ್ಷಿತ ಮಸೂದೆಗಳ ಪೈಕಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಮುಖವಾಗಿದೆ. ಇದೇ ಚಳಿಗಾಲದ ಅಧಿವೇಶದಲ್ಲಿ ಮಸೂದೆ ಮಂಡನೆಯಾಗಲಿದೆ. ಇದಕ್ಕೆ ಪೂರಕವಾಗಿ ಇದೀಕ ಕೇಂದ್ರ ಕ್ಯಾಬಿನೆಟ್ ಒನ್ ನೇಷನ್ ಒನ್ ಎಲೆಕ್ಷನ್ ಬಿಲ್‌ಗೆ ಅನುಮೋದನೆ ನೀಡಿದೆ.
ಈ ಮೂಲಕ ಮೋದಿ ಸರ್ಕಾರ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಮಾಡಲು ಹೊರಟಿರುವ ಮಹತ್ವದ ಬಿಲ್‌ಗೆ ಶೀಘ್ರದಲ್ಲೇ ಎರಡು ಸದನಗಳಲ್ಲಿ ಮಂಡನೆಯಾಗಲಿದೆ.
ಏಕಕಾಲಕ್ಕೆ ದೇಶದಲ್ಲಿ ಚುನಾವಣೆ ನಡೆಸುವ ಮಸೂದೆ ಇದಾಗಿದೆ. ಇದರಿಂದ ಚುನಾವಣೆಯ ಆರ್ಥಿಕ ಹೊರೆ ಕಡಿಮೆಯಾಗಲಿದೆ.ಆಡಳಿತ, ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವ ಪ್ರಮೇಯ ಕಡಿಮೆಯಾಗಲಿದೆ ಎಂದು ಬಿಜೆಪಿ ಹೇಳಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧಕ ಭಾಧಕಗಳು ಕುರಿತು ಚರ್ಚಿಸಿ ಈ ಸಮಿತಿ ವರದಿ ನೀಡಿದೆ. ತಜ್ಞರ ಸಮಿತಿ, ಚುನಾವಣಾ ಆಯೋಗ, ಉನ್ನತ ಮಟ್ಟದ ಸಮಿತಿಗಳ ವರದಿ ಆಧಾರದಲ್ಲಿ ಇದೀಗ ಒನ್ ನೇಷನ್ ಒನ್ ಎಲೆಕ್ಷನ್ ಮಸೂದೆ ರೆಡಿಯಾಗಿದೆ.
ಮೊದಲ ಹಂತದಲ್ಲಿ ಈ ಮಸೂದೆಗೆ ಕೇಂದ್ರ ಕ್ಯಾಬಿನೆಟ್ ಗ್ರೀನ್ ಸಿಗ್ನಲ್ ನೀಡಿದೆ. ಇದೀಗ ಇದೇ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಸಂಸತ್ತಿನಲ್ಲಿ ಮಂಡನೆಯಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

