Breaking News

ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ

ಧಾರವಾಡ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಮೂಲತಃ ಬೆಂಗಳೂರು ಮೂಲದವರಾದ ಮೂರು ಜನ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ನಾಲೈದು ಜನ ಗೋವಾ ಕಡೆಯಿಂದ ಮರಳಿ ಬೆಂಗಳೂರಿನತ್ತ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ ಕಡೆಯಿಂದ ಪುಣೆ ಕಡೆ ಹೋಗುತ್ತಿದ್ದ ಲಾರಿ ಈ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *