Breaking News

ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆ ಹಿಡಿದು ಕೆಲಕಾಲ ಪ್ರತಿಭಟನೆ

ಅಣ್ಣಿಗೇರಿ : ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ ಹಿನ್ನೆಲೆಯಲ್ಲಿ ಸುಮಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸರ ಹಲ್ಲೆಯನ್ನು ಸಮಸ್ತ ಅಣ್ಣಿಗೇರಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿ, ಇಂದು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆ ಹಿಡಿದು ಕೆಲಕಾಲ ಪ್ರತಿಭಟನೆಯನ್ನು ಸಮಾಜದ ಬಾಂಧವರು ಮಾಡಿದರು.

ಪ್ರತಿಭಟನೆ ಸಂಧರ್ಭದಲ್ಲಿ ಪೊಲೀಸ್ ಎಡಿಜಿಪಿ ಆರ್ ಹಿತೇಂದ್ರ ಅವರನ್ನು ವಜಾಗಳಿಸಬೇಕೆಂದು ಮತ್ತು ಮುಖ್ಯಮಂತ್ರಿಗಳು ಸಮಾಜದವರಿಗೆ ಮತ್ತು ಜಗದ್ಗುರುಗಳಿಗೆ ಕ್ಷಮೆ ಕೇಳಬೇಕೆಂದು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *