ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದಿಂದ 2020-2024ನೇ ಸಾಲಿಗೆ ಹಲವು ಪ್ರಮುಖ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.
2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ 2ನೇ ತಿದ್ದುಪಡಿ ವಿಧೇಯಕ ಮಂಡನೆಗೆ ಸದನವು ಅನುಮತಿಸಿತು.
ಪ್ರಶ್ನೋತ್ತರ ಅವಧಿಗೂ ಮುನ್ನ ವಿಧೇಯಕ ಮಂಡನೆ ಪ್ರಸ್ತಾವನೆ ಪರವಾಗಿರುವ ಸದಸ್ಯರು ಹೌದು ಎಂದು, ಪ್ರಸ್ತಾವ ವಿರುದ್ಧವಾಗಿರುವ ಸದಸ್ಯರು ಇಲ್ಲ ಎಂದು ಧ್ವನಿ ಮೂಲಕ ಸೂಚಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನ ಸದಸ್ಯರಿಗೆ ಸೂಚನೆ ನೀಡಿದರು.
2020-24ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ, 2020-24ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ, ಕರ್ನಾಟಕ ಪ್ರವಾಸೋದ್ಯಮ ರೋಪ್ ವೇಗಳ ವಿಧೇಯಕವನ್ನು ಮಂಡಿಸಲಾಯಿತು.
ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧಾರಣೆ 2ನೇ ತಿದ್ದುಪಡಿ ವಿಧೇಯಕ ಮಂಡನೆ, ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ, ಕರ್ನಾಟಕ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ, ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕಗಳನ್ನು ಸದನದ ಅನುಮತಿಯೊಂದಿಗೆ ಮಂಡಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





