Breaking News

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆ: ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿದ್ದಾರೆ.
ಈ ಅಂಕ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಅವರೇ ಪ್ರಕಟಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *