Breaking News

ಕಲಬುರಗಿ: ಪಿಎಂ ಸೂರ್ಯಘರ್ ಯೋಜನೆಗೆ ಗ್ರಾಹಕರ ನಿರಾಸಕ್ತಿ

ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ‘ಪ್ರಧಾನ ಮಂತ್ರಿ ಸೂರ್ಯಘರ್‌ ಯೋಜನೆ’ಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಅರ್ಜಿಗಳ ಸಲ್ಲಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಸೋಲಾರ್‌ ಪ್ಯಾನಲ್‌ ಅಳವಡಿಸಿಕೊಳ್ಳುವಲ್ಲಿ ಗ್ರಾಹಕರು ನಿರಾಸಕ್ತಿ ತೋರುತ್ತಿದ್ದಾರೆ.
ಫೆಬ್ರುವರಿ 29ರಂದು ಈ ಯೋಜನೆಗೆ ಚಾಲನೆ ದೊರಕಿದ್ದು, 10 ತಿಂಗಳ ಅವಧಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ 7,083 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಇದರಲ್ಲಿ 244 ಜನರು ಮಾತ್ರ ಸೋಲಾರ್‌ ಪ್ಯಾನಲ್‌ಗಳನ್ನು ಅಳವಡಿಸಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದರೆ, ಯಾದಗಿರಿಯಲ್ಲಿ ಅತಿ ಕಡಿಮೆ ಅರ್ಜಿಗಳು ಸಲ್ಲಿಕೆಯಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ 2,336, ರಾಯಚೂರು ಜಿಲ್ಲೆಯಲ್ಲಿ 1,866, ಕಲಬುರಗಿಯಲ್ಲಿ 1,067, ಬಳ್ಳಾರಿಯಲ್ಲಿ 776, ವಿಜಯನಗರದಲ್ಲಿ 436, ಬೀದರ್ ಜಿಲ್ಲೆಯಲ್ಲಿ 376, ಯಾದಗಿರಿ ಜಿಲ್ಲೆಯಲ್ಲಿ 274 ಅರ್ಜಿಗಳು ಸಲ್ಲಿಕೆಯಾಗಿವೆ

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *