ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು. ಅಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

