Breaking News

ಬಿಪಿಎಲ್ ಪಡಿತರ ಚೀಟಿ ರದ್ದು ಮಾನದಂಡ ಸರಿಯಿಲ್ಲ: ಡಾ.ಭರತ್ ಶೆಟ್ಟಿ

ಬೆಳಗಾವಿ: ಬಿಪಿಎಲ್‌ ಪಡಿತರ ಚೀಟಿ ರದ್ದು ಮಾನದಂಡ ಸಂಬಂಧ ಶಾಸಕರಾದ ಡಾ| ಭರತ್‌ ಶೆಟ್ಟಿ ವೈ. ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಪಿಎಲ್‌ ಪಡಿತರ ಫ‌ಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್‌ ರದ್ದಾಗುತ್ತಿದೆ.
ಕೆಲವೊಂದು ಸಾಲ ಸೌಲಭ್ಯಕ್ಕಾಗಿ ಕೇವಲ ಆದಾಯ ರಿಟರ್ನ್ ಮಾಡಿದವರ ಕಾರ್ಡ್‌ ರದ್ದಾಗುತ್ತಿದೆ. ಆಯುಷ್ಮಾನ್‌ ಜತೆ ಬಿಪಿಎಲ್‌ ಪಡಿತರ ಲಿಂಕ್‌ ಇರುವುದರಿಂದ ಮತ್ತೆ ಕಾರ್ಡ್‌ ಪಡೆಯಲು ಫ‌ಲಾನುಭವಿಯ ಫೈಲ್‌ ಜಿಲ್ಲಾ ಮಟ್ಟದಲ್ಲಿ ವಿಲೇವಾರಿ ಮಾಡುವ ಬದಲು ಬೆಂಗಳೂರಿಗೆ ಕಳಿಸಬೇಕಿದೆ. ಈ ನಡುವೆ ಚಿಕಿತ್ಸೆ ಪಡೆಯುತ್ತಿರುವವರ ಪಾಡು ಏನು, ಸರಕಾರ ಬಿಪಿಎಲ್‌ ಕಾರ್ಡ್‌ ರದ್ದು ಮಾನದಂಡವನ್ನು ಪುನರ್‌ ಪರಿಶೀಲಿಸಬೇಕು ಎಂದರು. ಇದಕ್ಕೆ ಆಹಾರ ಪೂರೈಕೆ ಸಚಿವ ಮುನಿಯಪ್ಪ ಉತ್ತರಿಸಿ, ಆರೋಗ್ಯ ಸಂಬಂಧಿ ಚಿಕಿತ್ಸೆಗೆ ಸ್ಥಳೀಯ ಉಪ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದರೆ ತತ್‌ಕ್ಷಣ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *