Breaking News

ರೈತರಿಗೆ ಸಿಹಿಸುದ್ದಿ: ತುಂತುರು ನೀರಾವರಿ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪಿಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ
ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಶೇ. 90 ರ ಸಹಾಯಧನದಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸಲಾಗುತ್ತಿದ್ದು, ಅವಶ್ಯಕತೆ ಇರುವ ರೈತರು ಸದರಿ ಯೋಜನೆಯ ಉಪಯೋಗ ಪಡೆಯಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣ, 2 ಪಾಸ್ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ನೋಟರಿ, ಜಾತಿ ಪ್ರಮಾಣ ಪತ್ರ (ಪ.ಜಾತಿ ಹಾಗೂಪ.ಪಂಗಡ) ಈ ದಾಖಲೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
ಪ.ಜಾತಿ ಹಾಗೂ ಪ.ಪಂಗಡ ರೈತರು 7 ವರ್ಷಕೊಮ್ಮೆ ಮತ್ತು ಸಾಮಾನ್ಯ ರೈತರಿಗೆ ಒಮ್ಮೆ ಮಾತ್ರ ಈ ಸ್ವೌಲಭ್ಯ ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕಿನ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳನ್ನು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕರು ರಮೇಶ್ ಎಸ್ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *