Breaking News

ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ: ಉಡುಪಿ ಜಿಲ್ಲೆಗೊಂದು ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
ಇಂದು (ಡಿ.13) ಕೇಂದ್ರ ಸಚಿವರನ್ನು ಭೇಟಿಯಾದ ಅವರು ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ, ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಹಾಗಾಗಿ ಉಡುಪಿ ಜನತೆಯ ಉತ್ತಮವಾದ ಆರೋಗ್ಯ ಸೇವೆಗಾಗಿ ಉಡುಪಿ ಜಿಲ್ಲೆಗೊಂದು ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜ್ ಮಂಜೂರು ಮಾಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *