Breaking News

ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕು: ಮಾಬುಸಾಬ ಯರಗುಪ್ಪಿ ಆಗ್ರಹ

ನವಲಗುಂದ : ಪಟ್ಟಣದಲ್ಲಿ ಇತ್ತೀಚಿಗೆ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಓಡಾಡುವುದು ಕಷ್ಟವಾಗಿದ್ದು, ಸೂಕ್ತ ಕ್ರಮ ಜರುಗಿಸಿ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು.

ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಎಸ್‌.ಪಿ.ಪೂಜಾರ ಅವರಿಗೆ ಮನವಿ ನೀಡಿ ಮಾತನಾಡಿದ ಅವರು ಪ್ರತಿ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಐದರಿಂದ ಹತ್ತು ನಾಯಿಗಳ ಹಿಂಡು ಬೀದಿಗಳಲ್ಲಿ ಓಡಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿವೆ, ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡುತ್ತಿರುವುದು ಸಾಮಾನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಿಯಾಜ ಅಹ್ಮದ ನಾಶಿಪುಡಿ ಮಾತನಾಡಿ ಬೀದಿ ನಾಯಿಗಳು ಕಸದ ತೊಟ್ಟಿಗಳಲ್ಲಿ ಸಾರ್ವಜನಿಕರು ಹಾಕಿದ ಕಸವನ್ನು ರಸ್ತೆಗೆ ಎಳೆದು ತಂದು ತಿನ್ನುತ್ತಿದ್ದು, ಇದರಿಂದ ಆ ರಸ್ತೆಗಳಲ್ಲಿ ಓಡಾಡುವುದು ಕಷ್ಟಕರವಾಗುತ್ತಿದೆ, ಹೆಚ್ಚುತ್ತಿರುವ ನಾಯಿಗಳಿಗೆ ಸಿಗಬೇಕಾದ ಆಹಾರವೂ ಸಿಗುತ್ತಿಲ್ಲ. ಇಂಥ ವೇಳೆ ಸಿಟ್ಟಿಗೆದ್ದ ನಾಯಿಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದು ಈ ಕೂಡಲೇ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕೆಂದರು.

ಈ ಸಂದರ್ಭದಲ್ಲಿ ಅಲ್ಲಾಭಕ್ಷ ಖಾಜಿ, ಎಸ್.ಎ ಖತೀಬ, ಮಕು.ದ ಖುದಾವಂದ, ಅಕ.ರ ಮುಲಾ ಉಪಸಿ ತರಿದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *