Breaking News

ಬೆಳಗಾವಿ: ರೈತರು ಹೆಚ್ಚಿನ ಸಿರಿಧಾನ್ಯ ಬೆಳೆಯಲು ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಧುಮೇಹ ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿ. ಈ ದೃಷ್ಟಿಯಿಂದ ಹೆಚ್ಚಿನ ರೈತರು ಸಿರಿಧಾನ್ಯಗಳನ್ನು ಬೆಳೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಇಂದು ‘ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಿರಿಧಾನ ಉತ್ಪಾದನೆಯಲ್ಲಿ ನಮ್ಮ ರಾಜ್ಯ ಮೂರನೇ ಸ್ಥಾನದಲ್ಲಿದೆ.
18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್‌ ಸಿರಿಧಾನ್ಯ ಬೆಳೆಯಲಾಗುತ್ತಿದೆ’ ಎಂದರು.
ಈಗ ದೇಶ- ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್‌, ಭಾರತದಲ್ಲಿ ಇದರ ಶೇ 31.50ರಷ್ಟು ಸಿರಿಧಾನ್ಯ ಬೆಳೆಯಲಾಗುತ್ತಿದೆ. ವಿಶ್ವದಲ್ಲಿ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶ ನಮ್ಮದು’ ಎಂದರು.
ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಡಿಸೆಂಬರ್ 23 ರಿಂದ 25ರವರೆಗೆ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ಹಮ್ಮಿಕೊಳ್ಳಲಾಗಿದೆ. ಈ ಧಾನ್ಯಗಳ ಮಹತ್ವವನ್ನು ತಿಳಿಸಿ, ಬೆಳೆಯಲು ಪ್ರೋತ್ಸಾಹಿಸಲಾಗುವುದು’ ಎಂದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *