ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, MOB ಗಳು, NDPS ಆರೋಪಿಗಳು, OC, ಜೂಜಾಟ ಆಡುವ ಆರೋಪಿಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು 180 ಜನರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಇವರ ಪೋಷಕರನ್ನೂ ಸಹ ಸ್ಥಳಕ್ಕೆ ಕರೆಯಿಸಿ ಸಹ ವರ್ತನೆ ಸುಧಾರಿಸಿಕೊಳ್ಳಲು ತಿಳಿಸಲಾಗಿರುತ್ತದೆ.
ಹುಬ್ಬಳ್ಳಿ ಉತ್ತರ ಉಪವಿಭಾಗದ ACP ರವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು
bigtvnews | Hubli Dharwad News | Kannada News | Karnataka News Hubli News | News In Hubli | Local news





