Breaking News

ಬೆಳಗಾವಿ ಅಧಿವೇಶನ: ಕಲ್ಯಾಣ, ಕಿತ್ತೂರು ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ₹3,740 ಕೋಟಿ

ಬೆಳಗಾವಿ (ಸುವರ್ಣ ವಿಧಾನಸೌಧ): ಕಲ್ಯಾಣ ಮತ್ತು ಕಿತ್ತೂರು ಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ₹3,740 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಆರಂಭವಾಗಿದೆ.
ಶುಕ್ರವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.
ನ್ಯಾಯಾಲಯಗಳಲ್ಲಿ ಸಿವಿಲ್‌ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡ ದಿನವೇ ತೀರ್ಪಿನ ದಿನಾಂಕ ನಿರ್ಧರಿಸುವ ಉದ್ದೇಶದ ‘ಸಿವಿಲ್‌ ಪ್ರಕ್ರಿಯೆ ತಿದ್ದುಪಡಿ ಮಸೂದೆ 2024’ಕ್ಕೆ ಸಂಪುಟ ಅನುಮೋದನೆ ನೀಡಿದೆ.
ನ್ಯಾಯಾಲಯಗಳಲ್ಲಿ ಹಲವು ವರ್ಷ ಸಿವಿಲ್‌ ಪ್ರಕರಣಗಳು ಇತ್ಯರ್ಥವೇ ಆಗುವುದಿಲ್ಲ. ಕೆಲವು ಪ್ರಕರಣಗಳು 10 ವರ್ಷದಿಂದ 20 ವರ್ಷದವರೆಗೆ ಉಳಿದು ಹೋಗುತ್ತವೆ. ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕು. ಇದಕ್ಕೆ ಪೂರಕವಾಗಿ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *