Breaking News

ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತ ಸಂಘದಿಂದ ಸಿಎಂ ಗೆ ಮನವಿ

ವಿಜಯಪುರ: ಜಿಲ್ಲೆಯಲ್ಲಿ ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಇದಕ್ಕೆ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ತೊಗರಿ ಬೀಜವೇ ಕಾರಣ.ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು ಆರೋಪಿಸಿದರು.
ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿದ್ಯಾಲಯದ ವಿಜ್ಞಾನಿಗಳು ತೊಗರಿ ಬೆಳೆ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಮಯದಲ್ಲಿ ಜಿಆರ್‌ಜಿ 152 ಹಾಗೂ 811 ಬೀಜ ಕಳಪೆಯಾಗಿದೆ ಎಂದು ರೈತರ ಎದುರು ಹೇಳಿದ್ದಾರೆ. ಆದರೆ ಸರ್ಕಾರಕ್ಕೆ ವರದಿ ಕಳುಹಿಸುವಾಗ ತೊಗರಿ ಬೀಜದ ಯಾವುದೇ ತೊಂದರೆ ಇಲ್ಲ. ಬೀಜ ಉತ್ತಮವಾಗಿದೆ. ಹವಾಮಾನದ ವೈಪರಿತ್ಯ ಕಾರಣ ಎಂದು ತಪ್ಪು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಆದ್ದರಿಂದ ಬೆಂಗಳೂರಿನಿಂದ ಬೇರೆ ತಂಡ ಕಳುಹಿಸಿ ಮತ್ತೊಮ್ಮೆ ತೊಗರಿ ಬೆಳೆ ಪರಿಶೀಲನೆ ಮಾಡಿ ಸೂಕ್ತ ವರದಿ ಪಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಬಸವರಾಜ ಚೌಧರಿ, ಮಹಾಂತೇಶ ಪಡಗಾನೂರು, ಶಿವಾನಂದ ಹಡಪದ, ಸಂತೋಷ ಪಡಗಾನೂರ, ಶಿವಾನಂದ ಪಡಗಾನೂರ ಸೇರಿದಂತೆ ಮುಂತಾದವರು ಇದ್ದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *