ಬೀದರ್: ವಿಷ ಸೇವಿಸಿ ಅಸ್ವಸ್ಥರಾಗಿ ನಗರದ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಂಜಾ ಸಂತ್ರಸ್ತರನ್ನು ಜಿಲ್ಲಾ ಬಿಜೆಪಿ ನಿಯೋಗ ಶುಕ್ರವಾರ ಭೇಟಿ ಮಾಡಿತು.
ಕಾರಂಜಾ ನೀರಾವರಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮೂವರು ರೈತರು ಗುರುವಾರ ವಿಷ ಸೇವಿಸಿ ಅಸ್ವಸ್ಥರಾಗಿದ್ದರು.
ಕಾರಂಜಾ ಸಂತ್ರಸ್ತರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರಾಜಪ್ಪ ಕಮಲಾಪುರ ಹಾಗೂ ರಾಜಶೇಖರ್ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅವರ ಸಂಬಂಧಿಕರಿಗೆ ಧೈರ್ಯ ತುಂಬಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಮುಖಂಡರಾದ ಶಿವಾನಂದ ಮಂಠಾಳಕರ, ಗುರುನಾಥ ಜ್ಯಾಂತಿಕರ್ ಮತ್ತಿತರರು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

