ಹುಬ್ಬಳ್ಳಿ: ಸಿಎಂ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಎಲ್ಲರ ಮೀಸಲಾತಿ ತೆಗೆದು ಅವರಿಗೆ ಕೊಡಲು ಹೊರಟಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನ್ನು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಕ್ಕೆ ವಿರೋಧವಿದೆ. ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಲ್ಲಿಗೆ ಇವರು ಮುತ್ತು ಕೊಡ್ತಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡ್ತಾರೆ. ಕುಕ್ಕರ್ ಬಾಂಬ್ ಇಟ್ಟವರಿಗೂ ಇವ್ರು ಮುತ್ತು ಕೊಡ್ತಾರೆ. ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆಂದ್ರೆ ಇವರ ಮನಸ್ಥಿತಿ ಹೇಗಿದೆ ಅಂತ ತಿಳಿಯುತ್ತಿಲ್ಲ ಎಂದರು.
ಪಂಚಮಸಾಲಿಗಳಿಗೆ 2ಎ ಮೀಸಲಾತಿ ಸಂವಿಧಾನ ವಿರೋಧಿ ಎಂಬ ವಿಚಾರ, ಹಸಿ ಗೋಡೆ ಮೇಲೆ ಹಳ್ಳು ಒಗೆಯುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡೋದು ಹೇಗೆ ಸಂವಿಧಾನ ವಿರೋಧಿಯಾಗುತ್ತೆ..? ಈ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





