Breaking News

ಕಚೇರಿ ಮುಂದೆ ತಮಟೆ ಸದ್ದು ಮಾಡಿ ಪ್ರತಿಭಟನೆ

ನವಲಗುಂದ: ಪಟ್ಟಣದ ತಾಲೂಕು ಪಂಚಾಯತ ಆವರಣದಲ್ಲಿ ಇರುವ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ಅವರ ಕಚೇರಿ ಎದುರು ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ತಾಲೂಕಾ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆ ಒಕ್ಕೂಟ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಸಂಬಂಧ ಧ್ವನಿ ಎತ್ತಬೇಕು. ಚಳಿಗಾಲದ ಅಧಿವೇಶನದಲ್ಲಿ ಕಾಲಹರಣ ಮಾಡದೇ ಮಾದಿಗ ಸಮಾಜಕ್ಕೆ ಸಿಗಬೇಕಾದ ಸವಲತ್ತುಗಳು ಹಾಗೂ ಒಳ ಮೀಸಲಾತಿ ಜಾರಿ ಮಾಡುವ ಸಂಬಂಧ ಚರ್ಚೆ ನಡೆಸಬೇಕು ಅಲ್ಲದೇ ಸದನದಲ್ಲಿ ಈ ಪ್ರಶ್ನೆ ಎತ್ತಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಕೋನರಡ್ಡಿ ಈ ಬಗ್ಗೆ ಸರಕಾರ ಈಗಾಗಲೇ ಆಲೋಚನೆ ನಡೆಸಿದೆ. ನಿಮ್ಮ ಧ್ವನಿಯಾಗಿ ನಾನು ಬೆಂಬಲವಾಗಿ ಇರುತ್ತೇನೆ ಎಂದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *