Breaking News

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ತಮಟೆ ಚಳವಳಿ

ಕಲಬುರಗಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಒಳ ಮೀಸಲಾತಿ ಬಗ್ಗೆ ಮಾತನಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನೆಯ ಮುಂಭಾಗದಲ್ಲಿ ಶನಿವಾರ ತಮಟೆ ಚಳವಳಿ ನಡೆಸಿದರು.
ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ, ನ್ಯಾಯಾಲಯದ ತೀರ್ಪಿನಂತೆ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಬೇಕು. ಮಾದಿಗ ಸಮುದಾಯದ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿ, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ರಾಜ್ಯ ಸರ್ಕಾರವು ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲವಕಾಶ ತೆಗೆದುಕೊಂಡಿದೆ. ವಿನಾಕಾರಣ ಏಕಸದಸ್ಯ ಪೀಠ ರಚಿಸಿ ದಸ್ತಾವನುಗಳನ್ನು ಕಲೆಹಾಕಲು ತೀರ್ಮಿಸಲಾಗಿದೆ. ಏಕ ಸದಸ್ಯ ಪೀಠ ರಚಿಸುವ ಅವಶ್ಯಕತೆಯೇ ಇರಲಿಲ್ಲ. ಇದು ಮಾದಿಗರ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಸಮಾಜವನ್ನು ದಾರಿ ತಪ್ಪಿಸುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿದರು.
ಸಚಿವರಿಗೆ ನಿಜವಾಗಲು ಮಾದಿಗ ಸಮಾಜದ ಬಗ್ಗೆ ಕಾಳಜಿ ಇದ್ದರೆ, ಚಳಿಗಾಲ ಅಧಿವೇಶನದಲ್ಲಿ ಒಳಮೀಸಲಾತಿಯ ಬಗ್ಗೆ ಮಾತನಾಡಿ ಒಳಮೀಸಲಾತಿಯನ್ನು ಜಾರಿ ಮಾಡಲು ಒತ್ತಾಯಿಸಬೇಕು. ಒಳ ಮೀಸಲಾತಿಯ ಬಗ್ಗೆ ಮಾತನಾಡದೆ ಮೌನವಾಗಿದ್ದರೆ ಅದು ಮಾದಿಗ ಸಮಾಜದ ಜನರು ನಮ್ಮ ವಿರೋಧಿಗಳೆಂದು ಭಾವಿಸಿ, ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಹೇಳಿದರು.‌
ಸಮಾಜದ ಮುಖಂಡರಾದ ದಶರಥ ಕಲಗುರ್ತಿ, ಮಲ್ಲಿಕಾರ್ಜುನ ಜೀನಕೇರಿ, ರಾಜು ಕಟ್ಟಿಮನಿ, ರವಿ ಕ್ರಾಂತಿಕಾರಿ, ಲಿಂಗರಾಜ ತಾರಫೈಲ್, ಪ್ರದೀಪ ಬಾಚನಳ್ಳಿಕರ್, ರಮೇಶ ವಾಡೇಕಾರ, ಅಂಬಾರಾಯ ಬೇಳಕೋಟಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *