Breaking News

ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಲು ಅವಕಾಶ ನೀಡುವುದಿಲ್ಲ: ಅಮಿತ್ ಶಾ

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಇಂತಹ ಪ್ರಯತ್ನಗಳಿಗೆ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ‘ಅಜೆಂಡಾ ಆಜ್ ತಕ್ 2024′ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೀಸಲಾತಿಯ ಬುಟ್ಟಿಗೆ ಕೈ ಹಾಕುವುದಿಲ್ಲ. ಆದರೆ, ಸಂವಿಧಾನ ಬದಲಿಸುವ ಕುರಿತ ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದು. ಕಾಂಗ್ರೆಸ್ ಪಕ್ಷವೇ ಮುಸ್ಲಿಮರ ಓಲೈಕೆಗಾಗಿ ಪರಿಶಿಷ್ಟರು ಹಾಗೂ ಹಿಂದುಳಿದವರ ಮೀಸಲಾತಿಯನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸೋತ ಬಳಿಕ ಆ ಪಕ್ಷದ ನಾಯಕ ರಾಹುಲ್‌ಗಾಂಧಿ ʼಅಹಂಕಾರಿʼಯಂತೆ ವರ್ತಿಸುತಿದ್ದಾರೆ ಎಂದು ಅಮಿತ್‌ ಶಾ ಕಿಡಿಕಾರಿದ್ದಾರೆ.
2014, 2019 ಹಾಗೂ 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಬಿಜೆಪಿ ಗೆದ್ದಿರುವ ಸೀಟುಗಳ ಸಂಖ್ಯೆ ಹೆಚ್ಚಿದೆ ಎಂದು ಮೂದಲಿಸಿದ ಅವರು, ʼಒಂದು ರಾಷ್ಟ್ರ ಒಂದು ಚುನಾವಣೆ, ಅಸಂವಿಧಾನಿಕ ವಕ್ಫ್ ಕಾಯಿದೆಗೆ ತಿದ್ದುಪಡಿ, ರಾಷ್ಟ್ರೀಯ ಭದ್ರತೆ ಕಾಯ್ದೆಗಳ ಜಾರಿಗೆ ಸರ್ಕಾರ ಬದ್ಧವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *