Breaking News

ಗದಗ ಜಿಲ್ಲೆಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ಗದಗ : ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು 200 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಕ್ಷೇತ್ರಕ್ಕೆ ನೂತನ ಕೃಷಿ ಕಾಲೇಜು ಸ್ಥಾಪನೆ ವಿಚಾರವಾಗಿ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ, ಕ್ಷೇತ್ರದ ಶಾಸಕ ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ.
ಮುಂದಿನ ಬಜೆಟ್​​​ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಆಗ್ರಹಿಸಿದ್ದಾರೆ ಎಂದರು.
ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಿಎಂ ರೋಣ ಕ್ಷೇತ್ರದ ಜನರಿಗೂ ಅಭಯ ನೀಡಿದರು. ಇದೇ ವೇಳೆ ಸಿಎಂ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲರು ಇದ್ದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *