ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಅಭಿವೃದ್ಧಿಯ ಕುರಿತು ಸೋಮವಾರದಿಂದ 3 ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಗಲಿದ್ದು, ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರ ಚಿತ್ತ ವಿಧಾನಸಭೆಯ ಚರ್ಚೆಯತ್ತ ನೆಟ್ಟಿದೆ.
ಗಡಿನಾಡು ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಆದಾಗಿನಿಂದಲೂ ಚಳಿಗಾಲದ ಅಧಿವೇಶನವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ನೂರಾರು ಕೋಟಿ ರೂ.ಖರ್ಚು ಮಾಡಲಾಗುತ್ತಿದೆ. ಎಲ್ಲಿ ಅಧಿವೇಶನ ನಡೆದರೂ ಉತ್ತರ ಕರ್ನಾಟಕ ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿಯುವುದು ತಪ್ಪಿಲ್ಲ ಎನ್ನುವ ಭಾವನೆ ಈಗಲೂ ಇದೆ.
ಹೀಗಾಗಿ ಈ ಬಾರಿಯ ಅಧಿವೇಶನದ ಬಗ್ಗೆ ಜನರ ನಿರೀಕ್ಷೆ ಹೆಚ್ಚಾಗಿದ್ದು, 3 ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿಯ ಚರ್ಚೆಗೆಂದೇ ಮೀಸಲಿಡಲಾಗಿದೆ. ಈಗಾಗಲೇ ವಿಧಾನಪರಿಷತ್ತಿನಲ್ಲಿ ಈ ಭಾಗದ ನೀರಾವರಿ ಯೋಜನೆಗಳ ಕುರಿತಂತೆ ಚರ್ಚೆ ಆರಂಭವಾಗಿದ್ದು, ಸೋಮವಾರದಿಂದ ವಿಧಾನಸಭೆಯಲ್ಲೂ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕರು ಬೆಳಕು ಚೆಲ್ಲಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

