ಬೆಂಗಳೂರು : ರಾಜ್ಯ ಸರ್ಕಾರವು ವಿಕಲಚೇತನ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿಯಂತೆ `ಸಂಚಾರಿ ಭತ್ಯ’ ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಈ ಮೊದಲು ಚಾಲ್ತಿಯಲ್ಲಿದ್ದ ರಾಜ್ಯ ಸರ್ಕಾರದ ನೀತಿಯಂತೆ, ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 14.02.1979 ಮತ್ತು ದಿನಾಂಕ: 17.07.1979ರ ಸರ್ಕಾರಿ ಆದೇಶಗಳಲ್ಲಿ ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ಆದೇಶದ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಿ ಆದೇಶಗಳನ್ನು ಹೊರಡಿಸಲಾಗಿತ್ತು.
ಸದರಿ ಸೌಲಭ್ಯವನ್ನು ನಿರ್ದಿಷ್ಟ ಬದಲಾವಣೆಗಳೊಂದಿಗೆ ಕಾಲದಿಂದ ಕಾಲಕ್ಕೆ ಮುಂದುವರೆಸಿಕೊಂಡು ಬರಲಾಗಿರುತ್ತದೆ. ಮುಂದುವರೆದು, 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ, ಮೇಲೆ (3)ರಲ್ಲಿ ಓದಲಾದ ದಿನಾಂಕ: 11.01.2019ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಸದರಿ ಆದೇಶದಲ್ಲಿನ ನಿಬಂಧನೆಗಳ ಪೂರೈಕೆಗೊಳಪಟ್ಟು ಪ್ರಯಾಣ ಭತ್ಯೆಯನ್ನು ಮಂಜೂರು ಮಾಡಲು ವಿಸ್ತ್ರತ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ದಿನಾಂಕ: 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗಿರುತ್ತದೆ. ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಪ್ರಯಾಣ ಭತ್ಯೆಯ ಮಂಜೂರಾತಿ ಕುರಿತಂತೆ ಪ್ರಸ್ತುತ ಚಾಲ್ತಿಯಲ್ಲಿರುವ ಪದ್ಧತಿಗೆ ಕೆಲವು ಬದಲಾವಣೆಗಳನ್ನು ಮಾಡಲು 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುತ್ತದೆ ಮತ್ತು ವಿಶೇಷ-ಚೇತನ ನೌಕರರುಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಮೂಲ ವೇತನದ 6% ರಷ್ಟು ಪ್ರಯಾಣ ಭತ್ಯೆಯ ಸೌಲಭ್ಯವನ್ನು ಮುಂದುವರೆಸಲು ಸಹ ಆಯೋಗವು ಶಿಫಾರಸ್ಸು ಮಾಡಿರುತ್ತದೆ.
ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ ಪ್ರಯಾಣ ಭತ್ಯೆ ಸೌಲಭ್ಯ ಮಂಜೂರು ಮಾಡುವುದನ್ನು ಕ್ರಮಬದ್ಧಗೊಳಿಸುವ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

