Breaking News
Featured Video Play Icon

ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ಮೇಲಿನ ಆರೋಪಕ್ಕೆ ತನಿಖೆಯಲ್ಲಿ ಸೂಕ್ತ, ಪೂರಕ ದಾಖಲೆ ಕಂಡಿಲ್ಲ: ಕಮಿಷನರ್ ಎನ್ ಶಶಿಕುಮಾ‌ರ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಕಳೆದ 2 ವರ್ಷಗಳಿಂದ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಯಳ್ಳೂರ್ ಅವರು ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ಹಾಗೂ ಕೆಲವು ಸಹೋದ್ಯೋಗಿಗಳಿಗೆ ಕೆಲಸದ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಿಗ್ಗೆ ಕಮಿಷನರ್ ಎನ್ ಶಶಿಕುಮಾರ್ ಅವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ಅಲ್ಲಿರುವ ಮಹಿಳಾ ಕಾನ್ಸ್ಟೇಬಲ್ ಗಳನ್ನು ವಿಚಾರಣೆ ನಡೆಸಿದ್ದಾರೆ.

ಈ ಕುರಿತು ಸಿಬ್ಬಂದಿಗಳನ್ನು ವಿಚಾರಿಸಿದಾಗ ಇನ್ಸ್ಪೆಕ್ಟರ್ ಸುರೇಶ ಯಳ್ಳೂರ್ ಅವರ ಬಗ್ಗೆ ಯಾವುದೇ ದೂರನ್ನು ನೀಡಿಲ್ಲ ಎಂಬ ಮಾಹಿತಿ ನೀಡಿಲ್ಲ, ಇನ್ಸ್ಪೆಕ್ಟರ್ ಮೇಲಿನ ಆರೋಪ ಸುಳ್ಳು, ತನಿಖೆಯಲ್ಲಿ ಯಾವುದೇ ಪೂರಕ ಅಂಶ ಕಂಡಿಲ್ಲ ಎಂಬ ಮಾಹಿತಿಯನ್ನು ಖುದ್ದು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ಅಲ್ಲದೇ ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕೂಡ ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮಹಿಳಾ ಮತ್ತು ಬೇರೆ ಸಿಬ್ಬಂದಿಗಳಿಗೆ ವಿಚಾರಣೆ ನಡೆಸಿದ್ದು,ಪತ್ರದಲ್ಲಿ ಬರೆದಿರುವ ಪ್ರಕಾರ ಇನ್ಸ್ಪೆಕ್ಟರ್ ಸುರೇಶ ಅವರ ಮೇಲೆ ಮಾಡಿದ ಆರೋಪಕ್ಕೆ ಪೂರಕವಾದ ದಾಖಲೆ ಹಾಗೂ ಮಾಹಿತಿ ಲಭ್ಯವಾಗಿಲ್ಲ. ಠಾಣೆಯಲ್ಲಿರುವ ಮಹಿಳಾ ಸಿಬ್ಬಂದಿಗಳು ಯಾರೊಬ್ಬರೂ ಕೂಡಾ ಈ ಪತ್ರವನ್ನು ಬರೆದಿಲ್ಲ ಹಾಗೆಯೇ ಇನ್ಸ್ಪೆಕ್ಟರ್ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿಯನ್ನು ಕೂಡಾ ಹಿರಿಯ ಅಧಿಕಾರಿಗಳ ಮುಂದೆ ಹೇಳಿಕೊಂಡಿಲ್ಲ ಎಂದು ತಿಳಿಸಿದ್ದಾರೆ.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *