ಧಾರವಾಡ:ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿಯ ತನಿಖೆ ನಡೆಸುವಂತೆ ಆಗ್ರಹಿಸಿ ಡಿ. ೧೯ರಂದು ಬೆಳಗ್ಗೆ ೧೦: ೩೦ಕ್ಕೆ ಬೆಳಗಾವಿಯ ಸುವರ್ಣಸೌಧ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರ ಹೇಳಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಕುರಿತು ಸಚಿವರಿಗೆ ಹಲವು ಬಾರಿ ಮನವಿ ನೀಡಿದರೂ ಸರಕಾರ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





