ಬೆಂಗಳೂರು : ಒಂದೆಡೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸದನದ ಹೊರಗೆ ಉಗ್ರ ಪ್ರತಿಭಟನೆ ನಡೆಯುತ್ತಿದೆ.
ಸುವರ್ಣಾ ಸೌಧಕ್ಕೆ ಹೋರಾಟಗಾರರು ಮುತ್ತಿಗೆಗೆ ಯತ್ನಿಸಿದಾಗ ನಡೆದ ಲಾಠಿಚಾರ್ಜ್ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಇದರ ಬೆನ್ನಲ್ಲೇ ಸಿಎಂ ಅವರು ಇದೇ ಡಿ.21ರಂದು ಸಾಯಂಕಾಲ ಪಂಚಮಸಾಲಿ ಶಾಸಕರ ಸಭೆ ನಡೆಸಲು ಉದ್ದೇಶಿಸಿದ್ದಾರೆ.
ಅಧಿವೇಶನ ಮುಕ್ತಾಯವಾದ ನಂತರದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಿಗದಿತ ದಿನಾಂಕದಂದು ಸಿಎಂ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಚರ್ಚಿಸಲು ಸಮುದಾಯದ ಎಲ್ಲಾ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬ ಸಿಎಂ ಅವರ ಹೇಳಿಕೆಯಿಂದ ಈಗಾಗಲೇ ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

