Breaking News

ಬೆಳಗಾವಿಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಂಕುಸ್ಥಾಪನೆ

ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಬಾಲ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದ ಅವರು, ಬೆಳಗಾವಿ ಎರಡನೇ ರಾಜಧಾನಿ ಮಟ್ಟಕ್ಕೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ನಡೆಯಬೇಕು, ಮೂಲಭೂತ ಸೌಲಭ್ಯಗಳು ಕೂಡ ನಿರ್ಮಾಣವಾಗಬೇಕು.
ನಮ್ಮ ಇಲಾಖೆಯಿಂದ ಜಿಲ್ಲೆಗೆ ಅನೇಕ ಯೊಜನೆಗಳನ್ನು ತರಲಾಗುತ್ತಿದೆ. ಇಷ್ಟೊಂದು ದೊಡ್ಡ ಜಿಲ್ಲೆಗೆ ಈವರೆಗೂ ಒಂದು ಸುಸಜ್ಜಿತ ಭಾಲಭವನ ಇಲ್ಲ, ನಮ್ಮ ಇಲಾಖೆಗೆ ಸುಸಜ್ಜಿತ ಕಟ್ಟಡ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನಗರದ ಮಧ್ಯದಲ್ಲಿಯೇ 4 ಎಕರೆ ಈ ವಿಶಾಲ ಜಾಗವನ್ನು ಗುರುತಿಸಿ ಬಾಲಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ100 ಕೋಟಿಗೂ ಅಧಿಕ. ಇದರ ಜೊತೆಗೆ, ನಮ್ಮ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಸಹ ನಿರ್ಧರಿಸಲಾಗಿದೆ, ಇದಕ್ಕೆ 6 ಕೋಟಿ ರೂ. ಮಂಜೂರಾಗಿದ್ದು, ಇಷ್ಟರಲ್ಲೇ ಹಣ ಬಿಡುಗಡೆಯಾಗಲಿದೆ. ಬಾಲಭವನಕ್ಕೆ ಈಗಾಗಲೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ, ಈಗಾಗಲೇ 2 ಕೋಟಿ ರೂ. ಬಿಡುಗಡೆ ಕೂಡ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮಕ್ಕಳಿಗಾಗಿ ರೈಲು, ಫ್ಯಾಂಟಸಿ ಪಾರ್ಕ್ ಸೇರಿದಂತೆ, ಆಟದೊಂದಿಗೆ ಕಲಿಯುವುದಕ್ಕೆ ಅವಕಾಶವಾಗುವಂತೆ ಸರ್ವವಿಧದ ಸೌಕರ್ಯಗಳನ್ನು ಬಾಲಭವನ ಒಳಗೊಳ್ಳಲಿದೆ. ಮಕ್ಕಳಿಗೆ ಕಲಿಯುವುದಕ್ಕೆ ಮತ್ತು ನಲಿಯುವುದಕ್ಕೆ ಇದೊಂದು ಅತ್ಯುತ್ತಮ ಸ್ಥಳವಾಗಬೇಕೆನ್ನುವುದೇ ನನ್ನ ಉದ್ದೇಶ ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *