ಬೀದರ್: ಜಿಲ್ಲೆಯಲ್ಲಿ ಡಿ. 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಬೀದರ್ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಷಿದಾರರಿಗೆ ಒಟ್ಟು ₹23.43 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.
ಒಟ್ಟು 10,191 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹13.16 ಕೋಟಿ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಾಂತ ಒಟ್ಟು 63,437 ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಇತ್ಯರ್ಥಗೊಳಿಸಲಾಗಿದೆ. ₹10.26 ಕೋಟಿ ವಸೂಲಾತಿ ಮಾಡಿ ಪರಿಹಾರ ಒದಗಿಸಲಾಗಿದೆ. ಅದೇ ರೀತಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂಧಾನದ ಮೂಲಕ ಮೂರು ಜೋಡಿಯನ್ನು ಪುನಃ ಒಂದುಗೂಡಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

