Breaking News

ಪ್ರತಿ ಕ್ಷೇತ್ರದ ಶಾಸಕರಿಗೆ 26 ಕೋಟಿ ರೂ. ಅನುದಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಅನುದಾನದ ಕೊರತೆಯಾಗುತ್ತಿದೆ ಎಂದು ಹಲವಾರು ಶಾಸಕರು ಆರೋಪ ಮಾಡುತ್ತಿದ್ದರು. ಅದರಲ್ಲೂ ಕಾಂಗ್ರೆಸ್ ಶಾಸಕರು ಕೂಡ ಆರೋಪಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಎಲ್ಲರಿಗೂ ವಾಗ್ದಾನ ನೀಡಿದ್ದಾರೆ.
ಕಾಂಗ್ರೆಸ್ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದು, ಪ್ರತಿಯೊಂದು ಕ್ಷೇತ್ರಕ್ಕೆ 26 ಕೋಟಿ ರೂ.ಅನುದಾನ ನೀಡಲು ಮುಂದಾಗಿದ್ದಾರೆ.
ಕಾಂಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ರೀತಿಯಾಗಿ ಘೋಷಿಸಿದ್ದಾರೆ. ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ದೃಷ್ಟಿಯಿಂದ ಎರಡು ಇಲಾಖೆಯಿಂದ ಒಟ್ಟು 6 ಸಾವಿರ ರೂ. ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *