ಬೆಳಗಾವಿ: ಭೌಗೋಳಿಕವಾಗಿ ವಿಶಾಲವಾಗಿರುವ ಬೆಳಗಾವಿಯನ್ನು ಎರಡು ಜಿಲ್ಲೆಗಳಾಗಿ ವಿಭಜಿಸುವ ಕುರಿತ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಕೇಂದ್ರ ಸರ್ಕಾರ ಕಂದಾಯ ಗಡಿ ಬದಲಿಸದಂತೆ ನೀಡಿರುವ ಆದೇಶದಿಂದಾಗಿ ಸದ್ಯಕ್ಕೆ ಬೆಳಗಾವಿ ವಿಭಜನೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬಿಜೆಪಿಯ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ, ಬೆಳಗಾವಿಯಿಂದ ಚಿಕ್ಕೋಡಿ ವಿಭಜಿಸಿ ಪ್ರತ್ಯೇಕ ಜಿಲ್ಲೆ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕಿದೆ. ಅಲ್ಲದೆ, ಸದ್ಯ ದೇಶದಲ್ಲಿ ಜನಗಣತಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕಂದಾಯ ಗಡಿಯನ್ನು ಬದಲಿಸದಂತೆ ಸೂಚಿಸಿದೆ. ಹೀಗಾಗಿ ಪ್ರತ್ಯೇಕ ಜಿಲ್ಲೆ ರಚನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

