Breaking News

210 ತಾಲೂಕುಗಳಿಗೂ ಭೂ ಸುರಕ್ಷೆ ಯೋಜನೆ ವಿಸ್ತರಿಸಲಾಗುವುದು: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸರ್ವೇ ಹಾಗೂ ಕಂದಾಯ ಇಲಾಖೆಗಳಲ್ಲಿನ ಹಳೆ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಡಾಟಾಬೇಸ್‌ನಲ್ಲಿ ಸಂರಕ್ಷಿಸುವ ಉದ್ದೇಶದಿಂದ 31 ತಾಲ್ಲೂಕುಗಳಲ್ಲಿ ಪ್ರಾಯೋಗಿಕ ಜಾರಿಗೊಳಿಸಿದ್ದ ‘ಭೂ ಸುರಕ್ಷೆ’ ಯೋಜನೆಯನ್ನು ಉಳಿದ 210 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೂಲ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ 31 ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದೆ. 2025ರ ಡಿಸೆಂಬರ್ ಒಳಗಾಗಿ ಉಳಿದ ತಾಲೂಕುಗಳಲ್ಲಿನ ದಾಖಲೆಗಳು ಸ್ಕ್ಯಾನಿಂಗ್ ಆಗಲಿವೆ. ಜನರಿಗೆ ಆನ್‌ಲೈನ್‌ನಲ್ಲಿಯೂ ಲಭ್ಯವಾಗಿದೆ’ ಎಂದರು.
ಅಲ್ಲದೆ, ಪ್ರಮುಖ ದಾಖಲೆಗಳ ಮೂಲಪ್ರತಿಯನ್ನು ತಾಲ್ಲೂಕು ಮಟ್ಟದಲ್ಲಿ ವೈಜ್ಞಾನಿಕವಾಗಿ ಸಂರಕ್ಷಿಸಿಡುವ ದೃಷ್ಟಿಯಿಂದ ತಾಲ್ಲೂಕಿಗೊಂದು ಕಾಂಪ್ಯಾಕ್ಟರ್ ನೀಡಲಾಗುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *