ಬೆಂಗಳೂರು: ಬಿಬಿಎಂಪಿಯ ಪೌರಕಾರ್ಮಿಕ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದು, ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು.
ಈ ಪೈಕಿ ಇದೀಗ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಬಹುತೇಕ 7,500 ರಿಂದ 8 ಸಾವಿರ ಮಹಿಳಾ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ನೇಮಕಾತಿಪತ್ರ ವಿತರಣೆ ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.
ಹಲವು ವರ್ಷದಿಂದ ಮಹಿಳಾ ಪೌರ ಕಾರ್ಮಿಕರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

