Breaking News

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರವು ನೀಡಿರುವ ಆಡಳಿತಾತ್ಮಕ ಅನುಮೋದನೆ ಮೇರೆಗೆ, ಅನುದಾನ ಲಭ್ಯತೆ ಅನುಸಾರ ಸೂಕ್ತ ಅನುದಾನ ಒದಗಿಸಿ, ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅವರು ವಿಧಾನ ಪರಿಷತ್ತಿನಲ್ಲಿ ಪಿ. ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1, 2 ಯೋಜನೆಯನ್ನು ಪೂರ್ಣಗೊಳಿಸಲಾಗಿದ್ದು, ಹಂತ-3ರ ಯೋಜನೆಯನ್ನು ಪರಿಷ್ಕೃತ ಅನುಮೋದಿತ ಅಂದಾಜು ಮೊತ್ತ ರೂ.51,148.94 ಕೋಟಿ (2014-15ನೇ ಸಾಲಿನ ದರಪಟ್ಟಿಯಂತೆ)ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇಲ್ಲಿಯವರೆಗೆ ರೂ.18,307.33 ಕೋಟಿ ವೆಚ್ಚ ಮಾಡಲಾಗಿರುತ್ತದೆ. ಅನುಮೋದಿತ ಯೋಜನಾ ಮೊತ್ತದನ್ವಯ ಬಾಕಿ ಉಳಿದ ಮೊತ್ತ ರೂ.32,841.61 ಕೋಟಿ ಆಗಿರುತ್ತದೆ ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1&2ರಲ್ಲಿ ಮುಳುಗಡೆಯಾದ ಜಮೀನು 1,75,470 ಎಕರೆ ಕ್ಷೇತ್ರಕ್ಕೆ ಮತ್ತು ಮುಳುಗಡೆಯಾದ 78,854 ಕಟ್ಟಡಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಮುಳುಗಡೆಯಾಗುವ ಜಮೀನು 75,563 ಎಕರೆ ಮತ್ತು ಮುಳುಗಡೆಯಾಗಲಿರುವ 25,660 ಕಟ್ಟಡಗಳ ಪರಿಹಾರಕ್ಕಾಗಿ ರೂ.17,627.00 ಕೋಟಿಗಳ ಅನುಮೋದಿತ ಮೊತ್ತದಲ್ಲಿ, ಇಲ್ಲಿಯವರೆಗೆ ರೂ.3,734.53 ಕೋಟಿ ಮೊತ್ತ ಪರಿಹಾರ ನೀಡಲಾಗಿದ್ದು,ಬಾಕಿ ಉಳಿದ ಮೊತ್ತ ರೂ.13,892.47 ಕೋಟಿ ಆಗಿರುತ್ತದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ರಾಜ್ಯಕ್ಕೆ ಹಂಚಿಕೆಯಾದ 130 ಟಿಎಂಸಿ ನೀರಿನ ಬಳಕೆಯು ಕೇಂದ್ರ ಸರ್ಕಾರದಿಂದ ಹೊರಡಿಸುವ ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿನ ಅಧಿಸೂಚನೆಗೆ ಒಳಪಟ್ಟಿರುತ್ತದೆ. ನ್ಯಾಯಾಧಿಕರಣ-2ರ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಕಣಿವೆ ರಾಜ್ಯಗಳ ದಾಖಲಿಸಿರುವ ವ್ಯಾಜ್ಯಗಳು ಇತ್ಯರ್ಥಕ್ಕೆ ಬಾಕಿ ಇದ್ದು, ನ್ಯಾಯಾಧೀಕರಣ ತೀರ್ಪಿನ ಗೆಜೆಟ್ ಅಧಿಸೂಚನೆಗೆ ರಾಜ್ಯ ಸರ್ಕಾರದಿಂದ ನಿರಂತರವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *