Breaking News

ರಾಜ್ಯದಲ್ಲಿ ಈವರೆಗೆ ಅರಣ್ಯ ಹಕ್ಕು ಕಾಯ್ದೆಯಡಿ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ಈವರೆಗೆ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬಿಜೆಪಿಯ ಸದಸ್ಯ ಶಾಂತರಾಮ್ ಬುಡ್ನ ಸಿದ್ದಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಟ್ಟು 2,59,199 ಅರ್ಜಿಗಳು ತಿರಸ್ಕೃತವಾಗಿದ್ದು, 23,583 ಅರ್ಜಿಗಳು ಮಾತ್ರ ಬಾಕಿ ಇರುತ್ತವೆ.
ರಾಜ್ಯದಲ್ಲಿ ಅರಣ್ಯ ಹಕ್ಕುಪತ್ರ ನೀಡುವ ಪ್ರಕ್ರಿಯೆ ವಿವಿಧ ಕಾರಣಗಳಿಂದ ನಿಧಾನಗತಿಯಲ್ಲಿರುತ್ತದೆ ಎಂದು ಹೇಳಿದರು.
ಅರ್ಜಿದಾರರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅರಣ್ಯ ಹಕ್ಕು ಸಮಿತಿಗಳ ಮುಂದೆ ಸಲ್ಲಿಸದಿರುವುದು. ಪರಿಶಿಷ್ಟ ಪಂಗಡಕ್ಕೆ ಸೇರಿರದ ಇತರೆ ಪಾರಂಪರಿಕ ಅರಣ್ಯವಾಸಿಗಳು 75 ವರ್ಷಗಳಿಂದ ಅರಣ್ಯ ಭೂಮಿ ಅವಲಂಬಿಸಿರುವ ಬಗ್ಗೆ ದಾಖಲೆ ಒದಗಿಸದೇ ಇರುವುದು. ರಾಷ್ಟ್ರೀಯ ಅಭಯಾರಣ್ಯ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗುವುದಕ್ಕೂ ಮೊದಲೇ ಅರಣ್ಯವಾಸಿಗಳು ಸ್ಥಳಾಂತರಗೊಂಡಿರುವುದರಿಂದ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಹೇಳಿದರು.
ಉಪವಿಭಾಗ ಸಮಿತಿ ಮತ್ತು ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ನಾಮನಿರ್ದೇಶಿತ ತಾಲೂಕು/ ಜಿಲ್ಲಾ ಪಂಚಾಯಿತಿ ಸದಸ್ಯರಿಲ್ಲದಿರುವ ಕಾರಣಗಳಿಂದ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಿಧಾನಗತಿಯಲ್ಲಿರುತ್ತದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *