Breaking News

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಭೆಯಲ್ಲಿ ಮುಖ್ಯವಾಗಿ ನಿರ್ಣಾಯಕ, ಭದ್ರತಾ ವಿಚಾರಗಳು ವಿಶೇಷವಾಗಿ ಜಮ್ಮು-ಕಾಶ್ಮೀರದ ಸ್ಥಿತಿಗತಿ ಕುರಿತಂತೆ ಚರ್ಚೆ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಹಾಗೂ ಸ್ಥಿರತೆ ಖಾತರಿಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಅವಲೋಕಿಸಲಾಗುವುದು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಸೇರಿದಂತೆ ಸೇನಾಪಡೆಗಳ ಮುಖ್ಯಸ್ಥರು ಹಾಗೂ ಇತರ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *