Breaking News

ರಾಜ್ಯಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ 2,035 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಿ.ಸುಧಾಕರ್

ಬೆಂಗಳೂರು: 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, 371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ 1,658 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಇನ್ನು 2,035 ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ. ಈಗಾಗಲೇ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ
ನೀಡಲಾಗಿದೆ ಎಂದು ತಿಳಿಸಿದರು.
371 (ಜೆ) ಅಡಿಯಲ್ಲಿ ನೇಮಕವಾಗಿರುವ ನೌಕರರು ತೊಂದರೆ ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಸದರಿ ಅಂಶಗಳನ್ನು ಆದ್ಯತೆ ಮೇಲೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡುವುದರ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಅವರ ಚುಕ್ಕೆ ಪ್ರಶ್ನೆಗೆ ಅವರು ಉತ್ತರಿಸಿದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *