Breaking News

ಕಲಂ 371(ಜೆ) ಜಾರಿ ನಂತರ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಕ್ಕಿವೆ. ಕಲಬುರಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ‌ ಕೆಲ ಮಿತ್ರರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ‌ ಮಾತುಗಳನ್ನಾಡಿದ್ದರು. ಕೆಲ ಲೋಪಗಳನ್ನು ಸರಿಪಡಿಸಿಕೊಂಡು‌,‌ ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *